ವೀರಾಜಪೇಟೆ ವರದಿ, ಡಿ.9: ಭಾರತೀಯ ಜನತಾ ಪಕ್ಷದ ಆರ್ಜಿ ವಲಯ ಮಹಿಳಾ ಮೋರ್ಚಾದ ಆಧ್ಯಕ್ಷೆ ನಿಶಾ ವಿಜಯನ್ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವೀರಾಜಪೇಟೆ ನಗರದ ದೊಡ್ಡಟ್ಟಿ ಚೌಕಿಯಲ್ಲಿರುವ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿಕೊಂಡ ಮುಂಚೂಣಿಯ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಸಂತೋಷದಾಯಕ ಬೆಳೆವಣಿಯಾಗಿದೆ ಎಂದರು.
ನಗರ ಕಾಂಗ್ರೆಸ್‍ನ ಅಧ್ಯಕ್ಷ ಜಿ.ಜಿ. ಮೋಹನ್ ಕುಮಾರ್, ಪಟ್ಟಣ ಪಂಚಾಯತಿ ಸದಸ್ಯ ಮೊಹಮ್ಮದ್ ರಾಫಿ ಮಾತನಾಡಿದರು.
ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಡಿ.ಪಿ.ರಾಜೇಶ್ ಪದ್ಮನಾಭ, ಬ್ಲಾಕ್ ಕಾಂಗ್ರೆಸ್‍ನ ಮಹಿಳಾ ಘಟಕದ ಅಧ್ಯಕ್ಷೆ ತೋರೆರ ಪೆÇನ್ನಕ್ಕಿ, ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೊಲುಮಂಡ ರಫೀಕ್, ಬ್ಲಾಕ್ ಯುವ ಕಾಂಗ್ರೆಸ್‍ನ ಅಧ್ಯಕ್ಷ ಉಮ್ಮರ್ ಫಾರೂಕ್ ವಿವಿಧ ಘಟಕದ ಮುಖಂಡರು ಹಾಜರಿದ್ದರು.