ಮಡಿಕೇರಿ, ಡಿ.9: ಜಾಗದ ವಿವಾದವೊಂದಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯ ಅಪ್ರು ರವೀಂದ್ರ ತಮಗೆ ಬಂದೂಕು ತೋರಿಸಿ ಕೊಲೆ ಬೆದರಿಕೆ ಒಡ್ಡಿರುವುದಾಗಿ ವಿಮಾ ಹರೀಶ್ ಎಂಬವರು ಪೊಲೀಸ್ ದೂರು ನೀಡಿದ್ದಾರೆ. ವಿಮಾ ಹರೀಶ್ ಮತ್ತಿತರರು ತನ್ನನ್ನು ದಾರಿ ತಡೆದು ಕೊಲೆ ಬೆದರಿಕೆ ಒಡ್ಡಿರುವದಾಗಿ ಅಪ್ರು ರವೀಂದ್ರ ದೂರು ನೀಡಿದ್ದಾರೆ. ಎರಡು ದೂರುಗಳನ್ನು ದಾಖಲಿಸಿಕೊಂಡಿರುವ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.