ಭಾಗಮಂಡಲ, ಡಿ. 9: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಯ್ಯಂಗೇರಿಯ ಕೆ.ಟಿ. ಭುವನ್ (28) ಎಂಬಾತನೆ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭುವನ್ ತಂದೆ-ತಾಯಿ ಈ ಹಿಂದೆಯೇ ಸಾವನ್ನಪ್ಪಿದ್ದು, ಕೂಲಿಕೆಲಸ ಮಾಡಿಕೊಂಡಿದ್ದ ಭುವನ್ ಮನೆಯಲ್ಲಿ ಒಬ್ಬನೇ ವಾಸವಿದ್ದ.

ಇಂದು ಬೆಳಿಗ್ಗೆ ಸಹೋದ್ಯೋಗಿ, ಭುವನ್ ಮನೆಗೆ ತೆರಳಿದ್ದ ಸಂದರ್ಭ ಆತ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮೃತ ಭುವನ್ ಮರಣಪತ್ರ ಬರೆದಿಟ್ಟಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.