ವೀರಾಜಪೇಟೆ, ಡಿ.9: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಪದವಿಗಳ ಆಯ್ಕೆಯ ವಿವಾದಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತೆರೆ ಎಳೆದಿರುವ ಹಿನ್ನಲೆಯಲ್ಲಿ ಚುನಾವಣೆ ಕಳೆದು ಎರಡು ವರ್ಷಗಳ ನಂತರ ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಜನ ಪ್ರತಿನಿಧಿಗಳ ಸಭೆ ತಾ.15ರಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷೆ ಟಿ.ಆರ್. ಸುಶ್ಮಿತಾ ಅಧ್ಯಕ್ಷತೆಯಲ್ಲಿ ನಡೆಯಲಿದೆ.