ಸೋಮವಾರಪೇಟೆ, ಡಿ. 10: ಇಲ್ಲಿನ ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘದ 24ನೇ ವಾರ್ಷಿಕ ಸಭೆ ಮಹಿಳಾ ಸಮಾಜದಲ್ಲಿ ಅಧ್ಯಕ್ಷೆ ಜಲಜಾ ಶೇಖರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಲಜಾ ಶೇಖರ್ ಮಾತನಾಡಿ, ಅಕ್ಷಯ ಮಹಿಳಾ ಪತ್ತಿನ ಸಹಕಾರ ಸಂಘವು 25ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಬೆಳ್ಳಿ ಹಬ್ಬದಾಚರಣೆಯ ಸಂಭ್ರಮದಲ್ಲಿದೆ. 2019-20ನೇ ಸಾಲಿನಲ್ಲಿ ರೂ. 5.49 ಲಕ್ಷ ಲಾಭಗಳಿಸಿದ್ದು, ಸದಸ್ಯರಿಗೆ ಶೇ. 5 ಲಾಭಾಂಶ ನೀಡುತ್ತಿದೆ. ಜಿಲ್ಲೆಯಲ್ಲಿಯೇ ಮೊದಲ ಮಹಿಳಾ ಸಂಘ ಎಂಬ ಹೆಮ್ಮೆಯೊಂದಿಗೆ ಪ್ರಾರಂಭಗೊಂಡ ಸಂಘವು ಇದೀಗ ರೂ. 22.65 ಲಕ್ಷ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಕಾಮಗಾರಿ ನಡೆಯುತ್ತಿದೆ ಎಂದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್, ಹಿರಿಯ ಸದಸ್ಯರಾದ ನಾಗರತ್ನಮ್ಮ ಜಯರುದ್ರಪ್ಪ, ಚಂದ್ರಕಲಾ ಸಿದ್ಧಲಿಂಗಪ್ಪ, ಕೊಡಗು ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಿಕ್ಷಕಿ ಎಲ್.ಎಂ. ಪ್ರೇಮ ಅವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಜಯಂತಿ ಶಿವಕುಮಾರ್, ನಿರ್ದೇಶಕರಾದ ಲೋಕೇಶ್ವರಿ ಗೋಪಾಲ್, ಉಷಾ ತೇಜಸ್ವಿ, ಬೇಬಿ ಚಂದ್ರಹಾಸ್, ಉಷಾ ರುದ್ರಪ್ರಸಾದ್, ಶೋಭಾ ಶಿವರಾಜ್, ಸಂಧ್ಯಾರಾಣಿ ಕೃಷ್ಣಪ್ಪ, ರೂಪಶ್ರೀ ರವಿಶಂಕರ್, ಲೀಲಾ ನಿರ್ವಾಣಿ, ಕವಿತಾ ವಿರೂಪಾಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೃಥ್ವಿ ಚಂದ್ರಶೇಖರ್ ಉಪಸ್ಥಿತರಿದ್ದರು.