ಮಡಿಕೇರಿ, ಡಿ. 10: ಜಿಲ್ಲೆಯಲ್ಲಿ ತಾ. 10 ರಂದು ಹೊಸದಾಗಿ 13 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 96,394 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,440 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,294 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 73 ಮಂದಿ ಸಾವನ್ನಪ್ಪಿದ್ದು 73 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 12 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 61 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 51 ನಿಯಂತ್ರಿತ ವಲಯಗಳಿವೆ.