ಮಡಿಕೇರಿ, ಡಿ. 11: ಜಿಲ್ಲೆಯಲ್ಲಿ ಅಕ್ಷರ ದಾಸೋಹ (ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪ ಹಾರ) ಯೋಜನೆಯಡಿ ಸರ್ಕಾರಿ/ಅನುದಾನಿತ ಶಾಲೆಗಳ 1ನೇ ತರಗತಿ ಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿ ಗಳಿಗೆ ಆಹಾರ ಧಾನ್ಯ ಹಂಚಿಕೆ ಮಾಡುವ ಕಾರ್ಯ ಪುನರಾರಂಭಗೊಂಡಿದೆ.

ಸರ್ಕಾರದ ಹೊಸ ಆದೇಶದಂತೆ ಆಹಾರ ಧಾನ್ಯಗಳನ್ನು ಜುಲೈ ಮಾಹೆಯವರೆಗೆ ವಿತರಿಸಲಾಗುತ್ತದೆ. ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹಂಚಿಕೆ ಕಾರ್ಯದ ಮೇಲುಸ್ತುವಾರಿಯನ್ನು ವಹಿಸಲಾಗಿದೆ. ಜಿಲ್ಲಾಧಿಕಾರಿಗಳು ಆಹಾರ ಧಾನ್ಯ ಸಂಗ್ರಹಿಸಲ್ಪಟ್ಟ ಗೋದಾಮಿಗೆ ಭೇಟಿ ನೀಡಿ ಆಹಾರ ಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಚ್ಚಾಡೋ ಮತ್ತು ಆಹಾರ ಇಲಾಖೆಯ ಉಪನಿರ್ದೇಶಕ ಗೌರವ್, ಶಿಕ್ಷಣಾಧಿಕಾರಿ ಕೃಷ್ಣಪ್ಪ ಹಾಜರಿದ್ದರು.