ಮಡಿಕೇರಿ, ಡಿ. 11: ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಹೆಬ್ಬಾಲೆ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಹಾಗೂ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. 12 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಹೆಬ್ಬಾಲೆ, ಹುಲುಸೆ, ಮರೂರು, ಶಿರಂಗಾಲ, ತೊರೆನೂರು, 6ನೇ ಹೊಸಕೋಟೆ, ಚಿಕ್ಕನಾಯಕನ ಹೊಸಳ್ಳಿ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.