ಮಡಿಕೇರಿ, ಡಿ. 11: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2020-21ನೇ ಸಾಲಿನಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ “ರೂ. 25 ಸಾವಿರ ವಿಶೇಷ ಪ್ರೋತ್ಸಾಹಧನ ಯೋಜನೆ”ಯಡಿ ಆಫ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖಾ ವೆಬ್‍ಸೈಟ್‍ನಿಂದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ. ಅಗತ್ಯ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ.ಸಂ.08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಅವರು ತಿಳಿಸಿದ್ದಾರೆ.