ಜಿಲ್ಲೆಯಲ್ಲಿ ತಾ.11 ರಂದು ಹೊಸದಾಗಿ 16 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 98,307 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,456 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,316 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 73 ಮಂದಿ ಸಾವನ್ನಪ್ಪಿದ್ದು 67 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 15 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , 52 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 54 ನಿಯಂತ್ರಿತ ವಲಯಗಳಿವೆ.