ಕುಶಾಲನಗರ, ಡಿ.13: ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೋತ್ಸವಕ್ಕೆ ತಾ. 14 ರಿಂದ (ಇಂದಿನಿಂದ) ಚಾಲನೆ ದೊರೆಯಲಿದೆ. ಬೆಳಗ್ಗೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಧ್ವಜಾರೋಹಣ ನಡೆಯುವುದು. 3 ದಿನಗಳ ಕಾಲ ನಡೆಯುವ ಮಂಡಲೋತ್ಸವ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು, ಉತ್ಸವಗಳು ನಡೆಯಲಿದೆ. ಕೋವಿಡ್ -19 ಹಿನ್ನೆಲೆಯಲ್ಲಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಗಣಪತಿ ತಿಳಿಸಿದ್ದಾರೆ.