ಮಡಿಕೇರಿ, ಡಿ. 13: ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಒಟ್ಟು 50 ಹುದ್ದೆಗಳ ನೇಮಕಾತಿ ಸಂಬಂಧ ಈಗಾಗಲೇ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ತಾ. 16 ರಂದು ಬೆಳಿಗ್ಗೆ 7 ಗಂಟೆಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳು ನಡೆಯಲಿದೆ.

ಈ ಬಗ್ಗೆ ಅರ್ಹ ಅಭ್ಯರ್ಥಿಗಳು ತಾ. 16 ರಂದು ಪರೀಕ್ಷೆಗೆ ಕೇಳಲಾಗಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ತಪ್ಪದೆ ಬೆಳಿಗ್ಗೆ 7 ಗಂಟೆಗೆ ಹಾಜರಿರುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‍ಸೈಟ್ (ತಿತಿತಿ.ಞsಠಿ.gov.iಟಿ) ರಲ್ಲಿ ಪಡೆಯಬಹುದು ಎಂದು ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷೆ ಕ್ಷಮಾ ಮಿಶ್ರ ತಿಳಿಸಿದ್ದಾರೆ.