ನಾಪೆÇೀಕ್ಲು, ಡಿ. 13: ಸಮಾಜದ ಏಳಿಗೆಗೆ ಎಲ್ಲಾ ಸದಸ್ಯರ ಸಹಕಾರ ಅಗತ್ಯ ಎಂದು ನಾಪೆÇೀಕ್ಲು ಸಹಕಾರ ಮಹಿಳಾ ಸಮಾಜದ ಅಧ್ಯಕ್ಷೆ ಕುಂಚೇಟಿರ ರೇಷ್ಮಾ ಉತ್ತಪ್ಪ ಹೇಳಿದರು.
ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ವೈಜ್ಞಾನಿಕ ಯುಗದಲ್ಲಿ ಮಹಿಳೆಯರು ಯಾವ ಕ್ಷೇತ್ರದಲ್ಲಿಯೂ ಪುರುಷರಿಗಿಂತ ಕಡಿಮೆಯಿಲ್ಲ.
ಮಹಿಳೆಯರ ಪ್ರತಿಭೆಯನ್ನು ಪ್ರದರ್ಶಿಸಲು ಮಹಿಳಾ ಸಮಾಜ ಒಂದು ವೇದಿಕೆಯಾಗಿದೆ. ಸಮಾಜದ ಎಲ್ಲಾ ಸದಸ್ಯರು ಅಭಿವೃದ್ಧಿಗೆ ಸಹಕಾರ ನೀಡಿದರೆ, ಸಮಾಜದ ಏಳಿಗೆ ಸಾಧ್ಯ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಸಮಾಜದ ಮಾಜಿ ಅಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ, ಮಹಿಳಾ ಸಮಾಜದ ಆಡಳಿತಾಧಿಕಾರಿ ಕರಣ್ ಕಾರ್ಯಪ್ಪ, ನಿರ್ದೇಶಕರು ಇದ್ದರು. ಪಿ.ಪಿ. ಶ್ರೀರಕ್ಷಾ ಪ್ರಾರ್ಥಿಸಿ, ಮಹಿಳಾ ಸಮಾಜದ ನಿರ್ದೇಶಕಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ನಿರೂಪಿಸಿ, ವಂದಿಸಿದರು.