ಮಡಿಕೇರಿ, ಡಿ. 13: ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ತಲಾ ಒಬ್ಬ ಅಭ್ಯರ್ಥಿಗಳು ಈಗಾಗಲೇ ಆಯ್ಕೆಯಾಗಿದ್ದು, ಮತ್ತಿಬ್ಬರಿಗೆ ಅವಕಾಶವಿದೆ. ಅರ್ಜಿ ಸಲ್ಲಿಸಲು ತಾ. 19 ಕಡೆ ದಿನವಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ.