ಮಡಿಕೇರಿ, ಡಿ. 13: ಅಮ್ಮತ್ತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಂಗ್ರೆಸ್ನ ಪ್ರಮುಖರಾಗಿ ಆ ಪಕ್ಷದಲ್ಲಿದ್ದ ನೆಲ್ಲಮಕ್ಕಡ ಟಿ. ಅಪ್ಪಯ್ಯ (ರಶ್ಮಿ) ಅವರು ಇದೀಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ತಾಲೂಕು ಅಧ್ಯಕ್ಷ ನೆಲ್ಲೀರ ಚಲನ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.