ಸೋಮವಾರಪೇಟೆ, ಡಿ. 14: ಮಹನ್ ದಾರ್ಶನಿಕರ ಸಾಲಿನಲ್ಲಿರುವ ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಮಾದರಿ ಸಂಸತ್‍ನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಕೊಡಗು ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಆಶಯ ನುಡಿಗಳನ್ನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಳಿನಿ ಗಣೇಶ್, ಉಪಾಧ್ಯಕ್ಷ ಬಿ.ಸಂಜೀವ್, ತಾ.ಪಂ. ಸದಸ್ಯೆ ತಂಗಮ್ಮ, ಪ.ಪಂ. ಸದಸ್ಯ ಪಿ.ಕೆ. ಚಂದ್ರು, ಕ.ಸಾ.ಪ ಜಿಲ್ಲಾ ಕೋಶಾಧ್ಯಕ್ಷ ಎಸ್.ಎ. ಮುರಳೀಧರ್, ಸಾಹಿತಿಗಳಾದ ವೈಲೇಶ್, ನ.ಲ.ವಿಜಯ್, ವಚನ ಗಾಯಕರಾದ ಸುಲೋಚನ ಪ್ರಸನ್ನ, ಗಂಗಾಂಭಿಕೆ ಉಪಸ್ಥಿತರಿದ್ದರು.

ತಾಲೂಕು ಕಸಾಪ ಅಧ್ಯಕ್ಷ ಜವರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ 20ಕ್ಕೂ ಅಧಿಕ ಗಾಯಕರು ವಚನ ಗಾಯನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ

ವಚನ ಗಾಯಕಿ ಚೇಂದಂಡ

ಸುಮಿ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು.