ಮಡಿಕೇರಿ, ಡಿ. 14 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾ. 15 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ಅರೆಭಾಷೆ ದಿನಾಚರಣೆ ಮತ್ತು ಅರೆಭಾಷೆ ಯಕ್ಷಗಾನ ತಾಳಮದ್ದಳೆ ಕೂಟ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ವಿಶ್ರಾಂತ ಪ್ರಾಂಶುಪಾಲ ಬಾರಿಯಂಡ ಜೋಯಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪೈಕೇರ ಮನೋಹರ ಮಾದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

*ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭವು ತಾ. 15 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಬೋಧಸ್ವರೂಪಾನಂದಜೀ ಮಹಾರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಷ್ಣುಮೂರ್ತಿ, ‘ಶಕ್ತಿ’ಯ ಸಲಹಾ ಸಂಪಾದಕ ಅನಂತಶಯನ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಸಿ.ಎಂ.ಮಹಾಲಿಂಗಯ್ಯ, ಖಜಾಂಚಿ ಎಸ್.ಟಿ.ಪುರುಷೋತ್ತಮ, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪಿ.ಆರ್.ವಿಜಯ ಇತರರು ಪಾಲ್ಗೊಳ್ಳಲಿದ್ದಾರೆ.

*ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ತಾ. 15 ರಿಂದ (ಇಂದಿನಿಂದ) ತಾ. 25 ರವರೆಗೆ ಶನಿವಾರಸಂತೆಯ ಮಹಿಳಾ ಸಮಾಜದಲ್ಲಿ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರ ನಡೆಯಲಿದೆ. ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸುವಂತೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕರು ತಿಳಿಸಿದ್ದಾರೆ.