ಕರಿಕೆ, ಡಿ. 14: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಕರಿಕೆ ಗ್ರಾಮಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಎಳ್ಳುಕೊಚ್ಚಿಯಲ್ಲಿ ನಡೆದ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಕ್ತಿ ಕೇಂದ್ರದ ಅಧ್ಯಕ್ಷ ಹೊಸಮನೆ ಹರೀಶ್, ಕಾರ್ಯಕರ್ತರು ಬಿ.ಜೆ.ಪಿ. ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದರು.

ಶಾಸಕ ಬೋಪಯ್ಯ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ. ಸರಕಾರ ಜನಪರ ಆಡಳಿತ ನಡೆಸುತ್ತಿದ್ದು, ಇದನ್ನು ಜನರಿಗೆ ಪ್ರಚಾರಪಡಿಸುವ ಕೆಲಸ ಮಾಡಬೇಕು ಎಂದರು. ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ಕಳೆದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನೆನೆಗುದಿಗೆ ಬಿದ್ದಿದ್ದ ಅಕ್ರಮ-ಸಕ್ರಮ ಸಮಿತಿಗೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಮರುಜೀವ ನೀಡಿದ್ದು, ಜನಪರ ಕೆಲಸ ಮಾಡಲಾಗುವುದು ಎಂದರು. ಸಭೆಯಲ್ಲಿ ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಪ್ರಮುಖ ಕೋಡಿ ಪೆÇನ್ನಪ್ಪ, ಐಸಾಕ್ ಮತ್ತಿತರರು ಇದ್ದರು.