ಸುಂಟಿಕೊಪ್ಪ, ಡಿ. 14: ಸಮೀಪದ ಗದ್ದೆ ಹಳ್ಳ ಅಂಗನ ವಾಡಿ ಕೇಂದ್ರ ದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಮತ್ತು ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಕಿ ವೀಣಾ ನಾರಾಯಣ್, ಮಕ್ಕಳ ಆರೋಗ್ಯದ ಕಡೆಗೆ ತಾಯಂದಿರು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ಆದ್ದರಿಂದ ತಾಯಂದಿರು ತಮ್ಮ ಆರೋಗ್ಯದಲ್ಲಿ ಏರುಪೇರು ಆಗದಂತೆ ನೋಡಿಕೊಳ್ಳಬೇಕು. ಆರೋಗ್ಯದಲ್ಲಿ ಸಮಸ್ಯೆಯಾದರೆ ಕೂಡಲೇ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಸಲಹೆ ಪಡೆಯುವಂತೆ ಕಿವಿಮಾತು ಹೇಳಿದರು.
ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಪುರುಷ ಆರೋಗ್ಯ ಸಹಾಯಕ ಚಂದ್ರೇಶ್ ಅವರು, ಬಸುರಿ, ಬಾಣಂತಿಯರು, ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಮತ್ತು ಅವರು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಮಾಹಿತಿ ನೀಡಿದರು. ನಂತರ ಆರೋಗ್ಯವಂತ 3 ಮಕ್ಕಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಬಹುಮಾನವನ್ನು ನೀಡಲಾಯಿತು. ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪ್ರಭಾವತಿ, ಅಂಗನವಾಡಿ ಕಾರ್ಯಕರ್ತೆಯರಾದ ಲಕ್ಷ್ಮಿ, ವಿಜಯ, ಸುಮ, ಆಶಾ ಕಾರ್ಯಕರ್ತೆಯರಾದ ಜ್ಯೋತಿ ಲಕ್ಷ್ಮಿ, ಗೀತಾ ಸೇರಿದಂತೆ ಇತರರು ಇದ್ದರು.