ನಾಪೆÉÇೀಕ್ಲು, ಡಿ. 17: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದ ಮಾದಂಡ ಅಬ್ಬಿ ಗಿರಿಜನರ ಕಾಲೋನಿಯ ನಿವಾಸಿಗಳು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥರು, ನಮ್ಮ ಗ್ರಾಮಕ್ಕೆ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲ. ಈ ಬಗ್ಗೆ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಸ್ಪಂದನ ದೊರೆತಿಲ್ಲ.

ಇಲ್ಲಿನ ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮಸ್ಥರು ಮತ್ತು ಕಾಲೋನಿಯ ನಿವಾಸಿಗಳು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿರುವುದಾಗಿ ಹೇಳಿದರು.

ಗೋಷ್ಟಿಯಲ್ಲಿ ಕುಡಿಯರ ಬೋಜಪ್ಪ, ಕುಡಿಯರ ಪೊನ್ನಪ್ಪ, ಮಾದಂಡ ಜಗದೀಶ್, ಮಾದಂಡ ಸಂದೇಶ್ ಅಪ್ಪಯ್ಯ, ಮಾದಂಡ ರಾಯ್ ಚಂಗಪ್ಪ ಇದ್ದರು.