ಮಡಿಕೇರಿ, ಡಿ. 17:ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಪ್ರದೇಶಗಳನ್ನು ಕೃಷಿ, ತೋಟಗಾರಿಕೆ ಮತ್ತು ಕಾಫಿ ಮಂಡಳಿ ವತಿಯಿಂದ ಸಮೀಕ್ಷೆ ನಡೆಸಿ ಶೇ. 33ಕ್ಕಿಂತ ಅಧಿಕ ಬೆಳೆ ಹಾನಿಯಾದ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳನ್ನು ತಾಲೂಕು, ಹೋಬಳಿ ಹಾಗೂ ಇಲಾಖಾವಾರು ಎ.ಬಿ.ಸಿ.ಯಂತೆ ಪ್ರಕಟಿಸಲಾಗಿದೆ. ಈ ಬಗ್ಗೆ ಪ್ರದೇಶಗಳ ವಿವರವನ್ನು ಜಿಲ್ಲಾಡಳಿತ ವೆಬ್‍ಸೈಟ್ ತಿತಿತಿ.ಞoಜಚಿgu.ಟಿiಛಿ.iಟಿ ನಲ್ಲಿ ವೀಕ್ಷಣೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.