ಮಡಿಕೇರಿ, ಡಿ. 17: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ಯಾಮಲಾ ಎಸ್. ಕುಂದರ್ ಅವರು ತಾ. 21 ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ತಾ. 21 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.