ಮಡಿಕೇರಿ, ಡಿ. 17: ಕನ್ನಡ ಭಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ವಿಷಯಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2019-20ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯಗಳಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಎಂ.ಫಿಲ್ ಪದವಿ ಪಡೆದ ಪ್ರೌಢ ಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ. 2019-20ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯಗಳಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಪಿಎಚ್‍ಡಿ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ.

2019ರ ಜನವರಿಯಿಂದ ಡಿಸೆಂಬರ್ 2019 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಸೃಜನೇತರ ಕನ್ನಡ ಗ್ರಂಥಗಳಿಗೆ ಸಹಾಯಧನ ನೀಡಲಾಗುವುದು.

ಪಿಎಚ್‍ಡಿ ಮತ್ತು ಎಂ.ಫಿಲ್ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನೇರವಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿsiಡಿi.iಟಿ ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು 2021 ರ ಜನವರಿ 16 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.