ಮಡಿಕೇರಿ, ಡಿ. 17: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮತ್ತೊಂದು ಸಾವು ಸಂಭವಿಸಿದ್ದು ಮೃತರ ಸಂಖ್ಯೆ 75 ಕ್ಕೇರಿದೆ. ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿರಿಯಾಪಟ್ಟಣದ 46 ವರ್ಷದ ಪುರುಷ ಸೋಂಕಿಗೆ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ತಾ. 17 ರಂದು ಹೊಸದಾಗಿ 22 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಹೊಸ 22 ಪ್ರಕರಣಗಳು - 1 ಸಾವು(ಮೊದಲ ಪುಟದಿಂದ) ಇದುವರೆಗೆ 1,02,918 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,593 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,382 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 75 ಮಂದಿ ಸಾವನ್ನಪ್ಪಿದ್ದು 146 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 20 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 4 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ ,122 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 72 ನಿಯಂತ್ರಿತ ವಲಯಗಳಿವೆ.