ಸೋಮವಾರಪೇಟೆ, ಡಿ.18: ಕಕ್ಕೆಹೊಳೆ ಜಂಕ್ಷನ್ ಸಮೀಪದ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ತಾ.20ರಂದು ಷಷ್ಠಿ ಹಬ್ಬದಾಚರಣೆ ಪ್ರಯುಕ್ತ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ. ವಿನೋದ್ ತಿಳಿಸಿದ್ದಾರೆ.
ದೇವಾಲಯದ ಪ್ರಧಾನ ಅರ್ಚಕರಾದ ಮಣಿಕಂಠನ್ ನಂಬೂದರಿಯವರ ಪೌರೋಹಿತ್ಯದಲ್ಲಿ ಅಂದು ಬೆಳಗ್ಗೆ 8 ಗಂಟೆಯಿಂದ ದೇವಾಲಯದಲ್ಲಿನ ನಾಗ ಸನ್ನಿಧಿಯಲ್ಲಿ ಹಾಲು, ಸಿಯಾಳ, ಹರಿಶಿಣ ಅಭಿಷೇಕ, ನಾಗತಂಬಿಲ ಸೇವೆ ಸೇರಿದಂತೆ ವಿವಿಧ ಪೂಜೆಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.