ಮಡಿಕೇರಿ, ಡಿ. 18: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಹಾಗೂ ಮಡಿಕೇರಿ ತಾಲೂಕು ಸಂಚಾಲಕ ಎ.ಪಿ. ದೀಪಕ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೋವಿಡ್ ಸಂಕಷ್ಟದಿಂದ ಜನ ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಈ ನಡುವೆಯೇ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿದ್ದಾರೆ.