ಮಡಿಕೇರಿ, ಡಿ. 18: ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ತಾ. 20 ರಂದು ಸುಬ್ರಹ್ಮಣ್ಯ ಷಷ್ಠಿ ಪೂಜೆಯನ್ನು ನಡೆಸಲು ಆಡಳಿತ ಮಂಡಳಿ ತೀರ್ಮಾನಿಸಿದೆ.
ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ಕ್ಷೀರಾಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ ಇತ್ಯಾದಿ ಸೇವೆಗಳು ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಸುಬ್ರಹ್ಮಣ್ಯ ದೇವರ ಭೂತ ಬಲಿ, 12:30ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ನಡೆಯಲಿದೆ.