ಮುಳ್ಳೂರು, ಡಿ. 18: ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ಜಾಗೃತಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಕುರಿತಾದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸಮೀಪದ ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಸಪ್ರಶ್ನೆ ಸ್ಪರ್ಧೆಗೆ ಸದರಿ ಕಾಲೇಜಿನಿಂದ 4 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಾದ ಲಾವಣ್ಯ ಮತ್ತು ದೀಕ್ಷಿತ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಹಿರಿಯ ಉಪನ್ಯಾಸಕ ಕುಮಾರಸ್ವಾಮಿ ತಿಳಿಸಿದ್ದಾರೆ.