ಮಡಿಕೇರಿ, ಡಿ. 18: ಜಿಲ್ಲೆಯಲ್ಲಿ ತಾ. 18 ರಂದು ಹೊಸದಾಗಿ 16 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,04,090 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,609 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,408 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 75 ಮಂದಿ ಸಾವನ್ನಪ್ಪಿದ್ದು 126 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 23 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 4 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 99 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 74 ನಿಯಂತ್ರಿತ ವಲಯಗಳಿವೆ.