ಕೃಷಿ ಕಾಯ್ದೆ ಬಗ್ಗೆ ಮಾತನಾಡಿದ ಪ್ರಧಾನಿ

ನವದೆಹಲಿ, ಡಿ. 18: ನೂತನ ಕೃಷಿ ಮಸೂದೆಯನ್ನು ರಾತ್ರಿ-ಹಗಲಾಗುವುದರ ಒಳಗೆ ತರಾತುರಿಯಲ್ಲಿ ಜಾರಿಗೆ ತಂದಿಲ್ಲ, ಈ ಸುಧಾರಿತ ಮಸೂದೆ ಬಗ್ಗೆ ಕಳೆದ 20-30 ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಸ್ತ್ರೃತವಾಗಿ ಚರ್ಚೆ ನಡೆಸುತ್ತಾ ಬಂದಿವೆ. ಕೃಷಿ ತಜ್ಞರು, ಆರ್ಥಿಕ ತಜ್ಞರು ಮತ್ತು ಪ್ರಗತಿಪರ ರೈತರು ನೂತನ ಕೃಷಿ ಮಸೂದೆಗಳು ಜಾರಿಯಾಗಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ನಾವು ತಂದಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅವರು ಇಂದು ಮಧ್ಯಪ್ರದೇಶದ ರೈಸನ್‍ನಲ್ಲಿ ನಡೆದ ‘ಕಿಸಾನ್ ಕಲ್ಯಾಣ್' ರೈತ ಸಮಾವೇಶವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿ, ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳು, ವಿರೋಧ ಪಕ್ಷಗಳ ಆರೋಪಗಳ ಬಗ್ಗೆ ಮಾತನಾಡಿದರು. ಎಲ್ಲಾ ರಾಜಕೀಯ ಪಕ್ಷದವರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ನಮ್ಮ ಮೇಲೆ ನಂಬಿಕೆ ಇಟ್ಟುಕೊಳ್ಳಿ, ನಿಮ್ಮ ಹಳೆ ಚುನಾವಣಾ ಪ್ರಣಾಳಿಕೆಗಳ ಭರವಸೆ, ಆಶ್ವಾಸನೆಗಳನ್ನು ಇಂದು ನಾವು ಈಡೇರಿಸುತ್ತಿದ್ದೇವೆ. ರೈತರ ಜೀವನ ಸುಧಾರಣೆಯಾಗಬೇಕು, ಅವರು ಉದ್ಧಾರವಾಗ ಬೇಕೆಂಬುದೊಂದೇ ನನ್ನ ಬಯಕೆ, ರೈತರು ಉದ್ಧಾರವಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಮೂಲಕ ಆಧುನಿಕತೆ ಬರಬೇಕು ಎಂಬದು ನನ್ನ ಉದ್ದೇಶವೇ ಹೊರತು ಬೇರಾವ ಸ್ವ ಹಿತಾಸಕ್ತಿಯಿಲ್ಲ ಎಂದರು. ರೈತರನ್ನು ಹಾದಿ ತಪ್ಪಿಸುವ ಕೆಲಸ ಮಾಡುವುದನ್ನು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ನೂತನ ಕೃಷಿ ಮಸೂದೆ ಬಂದು ಆರೇಳು ತಿಂಗಳುಗಳಾಗಿವೆ. ಈಗ ಹಠಾತ್ತಾಗಿ ಪ್ರತಿಭಟನೆಗೆ ಏಕೆ ಇಳಿದಿದ್ದಾರೆ, ಅಂದರೆ ತಮ್ಮ ರಾಜಕೀಯ ಲಾಭಕ್ಕಾಗಿ ರೈತರ ಮೂಲಕ ಸುಳ್ಳುಗಳ ಸರಮಾಲೆಯನ್ನು ಹೆಣೆದು ಆಟವಾಡುತ್ತಿದ್ದಾರೆ ಎಂದು ವಿರೋಧ ಪಕ್ಷದವರನ್ನು ಪ್ರಧಾನಿ ಟೀಕಿಸಿದರು. ರೈತರ ಹೆಸರಿನಲ್ಲಿ ಈ ಪ್ರತಿಭಟನೆ ಆರಂಭಿಸಿದವರು ಅವರು ಸರ್ಕಾರ ನಡೆಸುತ್ತಿದ್ದಾಗ, ಅವರ ಆಡಳಿತಾವಧಿಯಲ್ಲಿ ರೈತರಿಗೆ ಏನು ಕೊಟ್ಟರು ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

ಮೂರು ಜಿಲ್ಲೆಗಳಲ್ಲಿ ಎಸಿಬಿ ದಾಳಿ

ಬೆಂಗಳೂರು, ಡಿ. 18: ಆದಾಯ ಮೀರಿ ಆಸ್ತಿಗಳಿಕೆ ಆರೋಪದಡಿ ಮೂವರು ಸರ್ಕಾರಿ ಅಧಿಕಾರಿಗಳ ನಿವಾಸ, ಅವರ ಆಪ್ತರ ಮನೆಗಳ ಮೇಲೆ ಎಸಿಬಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲಾದ್ಯಂತ 13 ಸ್ಥಳಗಳಲ್ಲಿ ವಿವಿಧ ಎಸಿಬಿ ತಂಡಗಳಿಂದ ದಾಳಿ ಮಾಡಲಾಗಿದೆ. ಮೈಸೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ ಅವರ ಚಾಮುಂಡಿ ವಿಹಾರ ಲೇಔಟ್‍ನಲ್ಲಿರುವ ವಾಸದ ಮನೆ ಹಾಗೂ ಅವರ ಮಾವನ ಹೆಸರಿನಲ್ಲಿರುವ ಸರಸ್ವತಿಪುರಂ, ಮೈಸೂರಿನಲ್ಲಿರುವ ವಾಸದ ಮನೆ ಹಾಗೂ ಅವರ ತಂದೆ ವಾಸವಾಗಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮೂಗನೂರು ಗ್ರಾಮದ ವಾಸದ ಮನೆ, ಅವರ ಸ್ನೇಹಿತ ವಾಸವಿರುವ ಕೆ.ಸಿ. ಬಡಾವಣೆ, ಮೈಸೂರಿನಲ್ಲಿನ ವಾಸದ ಮನೆ ಮತ್ತು ಅವರು ಕರ್ತವ್ಯ ನಿರ್ವಹಿಸುತ್ತಿರುವ ಮೈಸೂರಿನ ಅರಣ್ಯಭವನ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ಮುಂದುವರೆದಿದೆ ಎಂದು ಎಸಿಬಿ ಮಾಹಿತಿ ನೀಡಿದೆ. ಇನ್ನು, ಹಾಸನದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಇಂಜಿನಿಯರ್ ಅಶ್ವಿನಿ ವಿ.ಎನ್. ಅವರ ಕೆಂಪೇಗೌಡ ಮುಖ್ಯ ರಸ್ತೆ, ಉದಯಗಿರಿ, ಹಾಸನದಲ್ಲಿರುವ ವಾಸದ ಮನೆ ಹಾಗೂ ಅವರ ತಂದೆ ವಾಸವಾಗಿರುವ ವಿದ್ಯಾನಗರ, ಹಾಸನದಲ್ಲಿನ ವಾಸದ ಮನೆ ಸೇರಿ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಚೇರಿ ಮೇಲೆ ದಾಳಿ ಮಾಡಲಾಗಿದ್ದು, ಪರಿಶೀಲನೆ ಮದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಕಚೇರಿಯನ್ನೇ ಮಾರಾಟಕ್ಕಿಟ್ಟರು !

ವಾರಣಾಸಿ, ಡಿ. 18: ಪ್ರಧಾನಿ ನರೇಂದ್ರ ಮೋದಿಯವರ ವಾರಣಾಸಿ ಕಚೇರಿಯನ್ನು "ಮಾರಾಟ" ಮಾಡುತ್ತಿರುವುದಾಗಿ ಹೇಳಿ ಆನ್‍ಲೈನ್ ಜಾಹೀರಾತನ್ನು ಪೆÇೀಸ್ಟ್ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವುದಾಗಿ ಪೆÇಲೀಸರು ಶುಕ್ರವಾರ ತಿಳಿಸಿದ್ದಾರೆ. ಲೋಕಸಭಾ ಕ್ಷೇತ್ರ ವಾರಣಾಸಿಯನ್ನು ಪ್ರತಿನಿಧಿಸುವ ಮೋದಿಯವರ "ಜನಸಂಪರ್ಕ ಕಾರ್ಯಾಲಯ(ಸಾರ್ವಜನಿಕ ಸಂಪರ್ಕ ಕಚೇರಿ)"ಯ ಚಿತ್ರವನ್ನು ಒಎಲ್‍ಎಕ್ಸ್ ವೆಬ್‍ಸೈಟ್‍ನಲ್ಲಿ ಹಾಕಿ ಇದನ್ನು "ಮಾರಾಟಕ್ಕೆ ಇಡಲಾಗಿದೆ" ಎಂದು ಆರೋಪಿಗಳು ಜನರನ್ನು ವಂಚಿಸಿದ್ದಾರೆ. ಈ ಕಚೇರಿ ನಗರದ ಜವಾಹರ್ ನಗರ ಪ್ರದೇಶದಲ್ಲಿದೆ ಮತ್ತು ಇದು ಭೆಲಾಪುರ ಪೆÇಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ವಾರಣಾಸಿ ಹಿರಿಯ ಪೆÇಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ಅಮಿತ್ ಪಾಠಕ್ ತಿಳಿಸಿದ್ದಾರೆ. ಪ್ರಧಾನ ಮಂತ್ರಿಯ ಕಚೇರಿಯನ್ನು ಒಎಲ್‍ಎಕ್ಸ್ ವೆಬ್‍ಸೈಟ್‍ನಲ್ಲಿ ಮಾರಾಟಕ್ಕೆ ಇಡಲಾಗಿದೆ ಎಂಬದು ನಿನ್ನೆ ನಮ್ಮ ಗಮನಕ್ಕೆ ಬಂದಿದೆ. ಭೆಲಾಪುರ ಪೆÇಲೀಸ್ ಠಾಣೆಯಲ್ಲಿ ತಕ್ಷಣ ಎಫ್‍ಐಆರ್ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗಿತ್ತು. ಸದ್ಯ ಪ್ರಕರಣದಲ್ಲಿ ಭಾಗಿಯಾದ ನಾಲ್ಕು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರ ಪೈಕಿ ಒಬ್ಬ ಮೋದಿಯವರ ಕಚೇರಿಯ ಚಿತ್ರವನ್ನು ತೆಗೆದುಕೊಂಡು ವೆಬ್‍ಸೈಟ್‍ನಲ್ಲಿ ಇರಿಸಿದ ವ್ಯಕ್ತಿಯಾಗಿದ್ದಾನೆ ಪಾಠಕ್ ತಿಳಿಸಿದ್ದಾರೆ.

ಪೊಲೀಸ್ ದಂಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು, ಡಿ. 18: ಡಿವೈಎಸ್ಪಿ ಲಕ್ಷ್ಮಿ ಆತ್ಮಹತ್ಯೆ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ಪೆÇಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತರನ್ನು ಹೆಚ್.ಸಿ. ಸುರೇಶ್ ಹಾಗೂ ಶೀಲಾ ಎಂದು ಗುರುತಿಸಲಾಗಿದೆ. ಶೀಲಾ ಕಂಟ್ರೋಲ್ ರೂಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ ಪತಿ ಸುರೇಶ್ ಎಸಿಪಿ ಕಚೇರಿಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸುರೇಶ್ ಹಾಗೂ ಶೀಲಾ ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ ದಂಪತಿಗಳಿಗೆ ಮಕ್ಕಳಿರಲಿಲ್ಲ. ದಂಪತಿಗಳ ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಈ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.