ಮಡಿಕೇರಿ, ಡಿ. 18: ಕೊಡಗಿನಲ್ಲಿ ಕಳೆದ ಮೂರು ವರ್ಷಗಳಿಂದ ಸಂಭವಿಸುತ್ತಿರುವ ಭೂಕುಸಿತಕ್ಕೆ ನಿಖರ ಕಾರಣದ ಬಗ್ಗೆ ಆಳವಾದ ಅಧ್ಯಯನ ಅಗತ್ಯ ಇದೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದರು.

ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆ ಆಯೋಜಿಸಿದ್ದ ಕಾರ್ಯಕರ್ತರ ಸಭೆಗೆ ಆಗಮಿಸಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಲಕಾವೇರಿಯ ಗಜಗಿರಿ ಬೆಟ್ಟ ಕುಸಿತದ ಕುರಿತು ಭೂವಿಜ್ಞಾನಿಗಳು ಪ್ರಕೃತಿ ಮೇಲೆ ಮಾನವನ ಹಸ್ತಕ್ಷೇಪ ಕಾರಣ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಹಲವು ವರ್ಷಗಳಿಂದ ಈ ಭಾಗದಲ್ಲಿ ಜನ ವಾಸಿಸುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದುರಂತ ಸಂಭವಿಸುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ವಿಜ್ಞಾನಿಗಳು ಮಾರ್ಗೋಪಾಯಗಳು ಸೂಚಿಸಬೇಕು. ಅದಕ್ಕೂ ಸ್ಪಂದಿಸುತ್ತೇವೆ ಎಂದರು.