ಮಡಿಕೇರಿ, ಡಿ. 19 : ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು ಹಾಗೂ ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಾಹಿತ್ಯ ಸಂಭ್ರಮ ಹಾಗೂ ಲೇಖಕರಾದ ಐ.ಮಾ.ಮುತ್ತಣ್ಣ, ಬಿ.ಡಿ.ಗಣಪತಿ ಅವರ ಜನ್ಮ ಶತಮಾನೋತ್ಸವದ ನೆನಪು ಕಾರ್ಯಕ್ರಮವು ತಾ.21 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ.
ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕವಿ ಕಲಾವಿದರ ಕೊಡುಗೆ ಎಂಬ ವಿಷಯದಲ್ಲಿ ಕಾಲೇಜು ಮತ್ತು ಸಾರ್ವಜನಿಕ ವಿಭಾಗಕ್ಕೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ, ಜಿಲ್ಲೆಯ ಕವಿಗಳಿಗೆ ಸ್ವ ರಚಿತ ಗೀತೆಗಳ ಗಾಯನ ಗೋಷ್ಠಿ ಹಾಗೂ ಹಿರಿಯ ಕವಿಗಳಾದ ದಿವಂಗತ ಐ.ಮಾ.ಮುತ್ತಣ್ಣ ಹಾಗೂ ಬಿ.ಡಿ.ಗಣಪತಿ ಅವರ ಜನ್ಮ ಶತಮಾನೋತ್ಸವದ ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ.
ಮೊದಲು ಬಂದ 2 ಕವಿಗಳಿಗೆ ಅವಕಾಶ ಸೀಮಿತವಾಗಿರುತ್ತದೆ. ಕವಿಗಳು ತಮ್ಮ ಸ್ವಂತ ರಚನೆಯ ಗೀತೆಗಳನ್ನು ರಾಗ ಸಂಯೋಜನೆಯೊಂದಿಗೆ ಪ್ರಸ್ತುತ ಪಡಿಸಬೇಕಾಗಿದೆ.
ಸ್ಪರ್ಧೆಗೆ ಹೆಸರನ್ನು ನೋಂದಾಯಿಸಲು ಡಿಸೆಂಬರ್, 18 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳು ಹಾಗೂ ನೋಂದಾವಣೆಗೆ ಮೊಬೈಲ್ ಸಂಖ್ಯೆ 9480556667, 9611018818 ನ್ನು ಸಂಪರ್ಕಿಸಬಹುದು ಎಂದು ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.