ನಾಪೋಕ್ಲು, ಡಿ. 19: ಸಮೀಪದ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ನೆರವೇರಿತು. ಶನಿವಾರ ದೇವಾಲಯದ ಆವರಣದಲ್ಲಿ ನಡೆದ ಎರಡು ತೆರೆಗಳೊಂದಿಗೆ ಉತ್ಸವ ಕೊನೆಗೊಂಡಿತು. ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ತೆರೆಗಳು ನಡೆದವು.

ಭಕ್ತರು ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಿದರು. ಮಧ್ಯಾಹ್ನ ಅನ್ನದಾನ ಏರ್ಪಡಿಸಲಾಗಿತ್ತು. ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಉತ್ಸವಕ್ಕೂ ಮೊದಲು ದೇವಾಲಯದಲ್ಲಿ ಮಣ್ಣಿನ ನಾಯಿ ಹರಕೆ ಸಲ್ಲಿಸುವ ಕಾರ್ಯಕ್ರಮ ಜರುಗಿತು. -ದುಗ್ಗಳ