ಮಡಿಕೇರಿ, ಡಿ. 20: ಜಿಲ್ಲೆಯಲ್ಲಿ ತಾ. 20 ರಂದು ಹೊಸದಾಗಿ 13 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,06,501 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,636 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,443 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 75 ಮಂದಿ ಸಾವನ್ನಪ್ಪಿದ್ದು 118 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 28 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 88 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 72 ನಿಯಂತ್ರಿತ ವಲಯಗಳಿವೆ.