ಶನಿವಾರಸಂತೆ: ಶನಿವಾರಸಂತೆ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕೊಡ್ಲಿಪೇಟೆ ಪಟ್ಟಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಹೆಚ್.ಇ. ದೇವರಾಜ್, ಕೊಡ್ಲಿಪೇಟೆ ಪೊಲೀಸ್ ಉಪಠಾಣೆಯ ಸಹಾಯಕ ಠಾಣಾಧಿಕಾರಿ ಕೃಷ್ಣೇಗೌಡ, ಸಿಬ್ಬಂದಿಗಳಾದ ಪರಮೇಶ್, ಸಫೀರ್, ಪ್ರದೀಪ್ ಹಾಗೂ ಆಟೋರಿಕ್ಷಾ ಚಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.ಗೋಣಿಕೊಪ್ಪಲು: ಕುಟ್ಟ ವೃತ್ತ ನಿರೀಕ್ಷಕ ಎಸ್. ಪರಶಿವಮೂರ್ತಿ ಹಾಗೂ ಠಾಣಾಧಿಕಾರಿ ಚಂದ್ರಪ್ಪ ಇವರ ಸಮ್ಮುಖದಲ್ಲಿ ಗಡಿಭಾಗ ಕುಟ್ಟದಲ್ಲಿ ಅಪರಾಧ ತಡೆ ಮಾಸಾಚರಣೆ ನಡೆಯಿತು.
ಆಟೋ ನಿಲ್ದಾಣ, ಜೀಪ್ ನಿಲ್ದಾಣ ಇತರೆಡೆಯಲ್ಲಿ ಅಪರಾಧ ತಡೆ ಮಾಸಾಚರಣೆ ಬಗ್ಗೆ ಅರಿವು ಮೂಡಿಸಲಾಯಿತು. ಕರಪತ್ರ ವಿತರಿಸಿ ಮೋಟಾರ್ ವಾಹನ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.