ಮಡಿಕೇರಿ, ಡಿ. 20: ಕೊಡವ ಜನಾಂಗದವರು ಗೋಮಾಂಸ ತಿನ್ನುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತಾ. 21 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಮಾಜಿ ಜಿ.ಪಂ. ಸದಸ್ಯೆ ಮನೆಯಪಂಡ ಕಾಂತಿ ಸತೀಶ್ ತಿಳಿಸಿದ್ದಾರೆ.‘ಶಕ್ತಿ’ಗೆ ಹೇಳಿಕೆ ನೀಡಿರುವ ಅವರು, ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಅವರು ಬಹಿರಂಗವಾಗಿ ಕೊಡವರ ಕ್ಷಮೆಯಾಚನೆ ಮಾಡಬೇಕು. ಕೊಡವರು ಗೋಮಾಂಸ ತಿನ್ನುತ್ತಾರೆ ಎಂದು ಅವರು ಬಹಿರಂಗವಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬಹಿರಂಗವಾಗಿಯೆ ಅವರು ಕ್ಷಮೆ ಕೋರಬೇಕು. ಈ ನಿಟ್ಟಿನಲ್ಲಿ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡಲಾಗುವುದು. ಬಹಿರಂಗವಾಗಿ ಕ್ಷಮೆಯಾಚನೆ ಮಾಡದಿದ್ದಲ್ಲಿ ಕೊಡವರ ಜಾತಿ ನಿಂದನೆ ಮಾಡಿದ ಆರೋಪದಡಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಕಾನೂನಾತ್ಮಕ ಹೋರಾಟವನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಬೋಸ್ ದೇವಯ್ಯ ಅವರು ಪತ್ರಿಕಾ ಹೇಳಿಕೆ ನೀಡಿ, ಸಿದ್ದರಾಮಯ್ಯ ಅವರ ಹೇಳಿಕೆ ಖಂಡನೀಯವಾಗಿದ್ದು, ಬಾಳುಗೋಡುವಿನ ಫೆಡರೇಷನ್ ಆಫ್ ಕೊಡವ ಸಮಾಜದಲ್ಲಿ ಹಾಕಿರುವ ಅವರ ಭಾವಚಿತ್ರವನ್ನು ತೆರವು ಮಾಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ತಾ. 22 ರಂದು (ನಾಳೆ) ಅಮ್ಮತ್ತಿ ಕೊಡವ ಸಮಾಜದ ನೇತೃತ್ವ ದಲ್ಲಿ ಸ್ವಾಭಿಮಾನಿ ಕೊಡವರ ಬಳಗ ದಿಂದ ಅಮ್ಮತ್ತಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡವರು ಗೋಮಾಂಸ ಸೇವಿಸುತ್ತಾರೆ ಎಂದು ಹೇಳಿರುವುದು ಖಂಡನೀಯ ಎಂದು ಕೊಡವ ಸಮಾಜಗಳ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕೊಡವರು
ಕೋವಿಡ್ ನಿಯಮ ಪಾಲಿಸಿ
ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸರ್ವರೂ ಕೋವಿಡ್ ನಿಯಮವನ್ನು ಪಾಲಿಸುವಂತೆ ಕಾಂತಿ ಸತೀಶ್ ಮನವಿ ಮಾಡಿದ್ದಾರೆ. ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳುವಂತೆ ಕೋರಿದ್ದಾರೆ.