ಗೋಣಿಕೊಪ್ಪ ವರದಿ, ಡಿ. 21 : ಇಲ್ಲಿನ ದಿ. ಮರ್ಚೆಂಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 23 ರಂದು ದಿ. ಮರ್ಚೆಂಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ಸೊಸೈಟಿ ಪ್ರಕಟಣೆ ತಿಳಿಸಿದೆ.