ಸೋಮವಾರಪೇಟೆ, ಡಿ.21: ಪಟ್ಟಣ ಪಂಚಾಯಿತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವದು ಹಾಗೂ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ರೂ. 10 ಕೋಟಿ ಅನುದಾನ ಒದಗಿಸುವಂತೆ ಪ.ಪಂ. ನಿಯೋಗದಿಂದ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಗೆ ಆಗಮಿಸಿದ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿದ ಪ.ಪಂ. ಅಧ್ಯಕ್ಷ ರನ್ನೊಳಗೊಂಡ ನಿಯೋಗ, 10 ಕೋಟಿ ವಿಶೇಷ ಅನುದಾನ ಸೇರಿದಂತೆ ಇನ್ನಿತರ ಬೇಡಿಕೆಗಳ ಪಟ್ಟಿಯನ್ನು ಸಚಿವರಿಗೆ ಸಲ್ಲಿಸಿದರು.

ಇದರೊಂದಿಗೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಚೌಡ್ಲು, ಹಾನಗಲ್ಲು ಹಾಗೂ ಬೇಳೂರು ಗ್ರಾಮ ಪಂಚಾಯಿತಿಗಳನ್ನು ಪ.ಪಂ. ವ್ಯಾಪ್ತಿಗೆ ಒಳಪಡಿಸಿ ಪಂಚಾಯಿತಿಯನ್ನು ವಿಸ್ತರಿಸುವಂತೆ ಈಗಾಗಲೇ ತೀರ್ಮಾನಿಸಲಾಗಿದ್ದು, ಈ ಬಗ್ಗೆ ತಾ. 18.03.2017ರಂದು ನಡೆದ ಸಾಮಾನ್ಯ ಸಭೆಯಲ್ಲೂ ನಿರ್ಣಯ ಕೈಗೊಳ್ಳ ಲಾಗಿದೆ. ಇದರೊಂದಿಗೆ ಜಿಲ್ಲಾಧಿಕಾರಿ ಗಳ ಅನುಮೋದನೆ ಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪೌರಾಡಳಿತ ನಿರ್ದೇಶನಾಲಯಕ್ಕೆ ಕಳುಹಿಸಿದ್ದು, ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರ ಗಮನ ಸೆಳೆಯಲಾಯಿತು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಖಾಸಗಿಯವರಿಂದ ಭೂಮಿ ಖರೀದಿಸಲು ಸರ್ಕಾರದಿಂದ ಅನುದಾನ ಒದಗಿಸುವಂತೆ ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಲಾಗಿದೆ. ಇದರೊಂದಿಗೆ ಜಿಲ್ಲಾಧಿಕಾರಿ ಗಳ ಅನುಮೋದನೆ ಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪೌರಾಡಳಿತ ನಿರ್ದೇಶನಾಲಯಕ್ಕೆ ಕಳುಹಿಸಿದ್ದು, ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರ ಗಮನ ಸೆಳೆಯಲಾಯಿತು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಖಾಸಗಿಯವರಿಂದ ಭೂಮಿ ಖರೀದಿಸಲು ಸರ್ಕಾರದಿಂದ ಅನುದಾನ ಒದಗಿಸುವಂತೆ ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಪ.ಪಂ. ಸದಸ್ಯರ ಮನವಿಯನ್ನು ಸ್ವೀಕರಿಸಿದ ಸೋಮಣ್ಣ ಅವರು, ವಿಶೇಷ ಅನುದಾನಕ್ಕೆ ಕ್ರಮ ಕೈಗೊಳ್ಳಲಾಗುವದು, ಗಡಿ ವಿಸ್ತರಣೆಗೆ ಸಂಬಂಧಿಸಿದಂತೆ ಇಲಾಖೆಯ ಸಚಿವರ ಗಮನ ಸೆಳೆಯಲಾಗುವದು. ನಿವೇಶನ ರಹಿತರಿಗೆ ನಿವೇಶನ ಒದಗಿಸಿ ಮನೆ ನಿರ್ಮಿಸಿ ಕೊಡಲು ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಿದರಲ್ಲದೇ, ಕಮಿಷನ್ ರಹಿತವಾಗಿ, ಪಾರದರ್ಶಕತೆ ಯಿಂದ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಬೇಕು ಎಂದರು.

ಈ ಸಂದರ್ಭ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್, ಸದಸ್ಯರಾದ ಬಿ.ಆರ್. ಮಹೇಶ್, ಶುಭಾಕರ್, ಪಿ.ಕೆ. ಚಂದ್ರು, ಸೋಮೇಶ್, ಎಸ್, ಮಹೇಶ್, ಶರತ್‍ಚಂದ್ರ, ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಾನು ನಾಮ್‍ಕೇವಾಸ್ತೆ ಉಸ್ತುವಾರಿ; ಸೋಮಣ್ಣ

“ನಾನು ನಾಮ್‍ಕೇವಾಸ್ತೆ ಉಸ್ತುವಾರಿಯಷ್ಟೇ, ಇಲ್ಲಿ ನೋಡಿಕೊಳ್ಳಲು ನಿಮ್ಮ ಸಾಹೇಬರಿದ್ದಾರೆ (ಅಪ್ಪಚ್ಚುರಂಜನ್) ಅವರೇ ಎಲ್ಲವನ್ನೂ ನಿಭಾಯಿಸುತ್ತಾರೆ. ಕೊಡಗಿನಲ್ಲಿ ಈರ್ವರು ಶಾಸಕರು, ಎಂಎಲ್‍ಸಿ ಇದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿ ನಿಮ್ಮ ಬೇಡಿಕೆಗಳ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದರು.