ಮಡಿಕೇರಿ, ಡಿ. 21: ಜಿಲ್ಲೆಯಲ್ಲಿ ತಾ.21 ರಂದು ಹೊಸದಾಗಿ 17 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,01,032 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,653 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,453 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 75 ಮಂದಿ ಸಾವನ್ನಪ್ಪಿದ್ದು 125 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 30 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 93 ಮಂದಿ ಹೋಮ್ ಐಸೋಲೇಳನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 74 ನಿಯಂತ್ರಿತ ವಲಯಗಳಿವೆ.