ಗೋಣಿಕೊಪ್ಪ ವರದಿ, ಡಿ. 22: ನೂತನ ವರ್ಷಾಚರಣೆ ವೇಳೆ ತುರ್ತು ಸ್ಪಂದನೆಗೆ ಕೊಡಗು ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗೆ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು ಆರೋಗ್ಯ ಕವಚ 108 ಜಿಲ್ಲಾ ವ್ಯವಸ್ಥಾಪಕ ಎಸ್. ಸೋಮಶೇಖರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೊಸ ವರ್ಷದ ಆಚರಣೆಗಳಲ್ಲಿ ಸರಾಸರಿ ಶೇ. 30 ರಿಂದ 35 ವಾಹನ ಅಪಘಾತ ಪ್ರಕರಣಗಳು ನಡೆದಿರುವ ಹಿನ್ನೆಲೆ ಇದ್ದು, 108 ಆಂಬುಲೆನ್ಸ್ ಸೇವೆಯು ಪೆÇಲೀಸ್ ಇಲಾಖೆ ಯೊಂದಿಗೆ ನಿಕಟ ಸಹಕಾರದೊಂದಿಗೆ ತುರ್ತು ಸೇವೆ ನೀಡಲು ಯೋಜನೆ ರೂಪಿಸಿಕೊಂಡಿದೆ. ಇದರಂತೆ ಹೆಚ್ಚಿನ ತುರ್ತು ಪರಿಸ್ಥಿತಿ ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ.

ಮುಂಜಾಗೃತವಾಗಿಯೇ ಎಲ್ಲಾ ಆಂಬುಲೆನ್ಸ್‍ನಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯಲ್ಲಿರುವ 8 ಆಂಬುಲೆನ್ಸ್‍ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿ ಸಲಾಗಿದೆ.

ತುರ್ತು ಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9513640007 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ