ಭಾಗಮಂಡಲ, ಡಿ. 22: ಕರಿಕೆಯ ಆಲತಿಕಾಡುವಿನಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ಅಶ್ವಥ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೀಪಿನಲ್ಲಿ (ಕೆಎ 19 ಎಂ 4382) ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಭಾಗಮಂಡಲ ಪೊಲೀಸರು ದಾಳಿ ನಡೆಸಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.