ವೀರಾಜಪೇಟೆ ವರದಿ, ಡಿ. ೨೩ : ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ವೀರಾಜಪೇಟೆ ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಬಾಣೆ ಗ್ರಾಮದ ಗ್ರಾಮಸ್ಥರು ತಾ.೨೨ ರಂದು ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನು ನೀಡಿದ ಹಿನ್ನೆಲೆ ಇಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದÀ ಸ್ಥಳಕ್ಕೆ ಭೇಟಿ ನೀಡಿ ಮತದಾರರ ಮನವೊಲಿಸಿದರು.
ಚುನಾವಣೆ ಬಹಿಷ್ಕಾರದಿಂದ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ರಸ್ತೆ ಅಗಲೀಕರಣವನ್ನು ಮುಂದಿನ ಅನುದಾನವನ್ನು ಸಮರ್ಪಕವಾಗಿ ಬಳಸಿ ರಸ್ತೆ ಸರಿಪಡಿಸುವ ಭರವಸೆ ನೀಡಿ ಮತದಾರರ ಮನವೊಲಿಸುವಲ್ಲಿ ಸಫಲರಾದರು.
ತಹಶೀಲ್ದಾರ್ ಸಮ್ಮುಖದಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರವನ್ನು ಹಿಂಪಡೆದರು. ನಗರ ಠಾಣಾಧಿಕಾರಿ ಜಗದೀಶ್ ದೂಳ ಶೆಟ್ಟಿ ಇದ್ದರು.