ಮಡಿಕೇರಿ, ಡಿ. ೨೩: ಕಾಫಿ ಮಂಡಳಿಯಿAದ ಕಾಫಿ ತೋಟದ - ಕ್ಯೂರಿಂಗ್ ಕಾರ್ಮಿಕರ ಮಕ್ಕಳಿಗೆ ೨೦೧೯-೨೦ನೇ ರಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ ಪ್ರಸಕ್ತ ೨೦೨೦-೧೨ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ., ಪಾಲಿಟೆಕ್ನಿಕ್, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ - ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ.

೨೦೧೯-೨೦ ರಲ್ಲಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾಗಿ ಪ್ರಥಮ ವರ್ಷದ ಎಂ.ಬಿ.ಬಿ.ಎಸ್., ಬಿ.ಇ., ಕೃಷಿ, ಫಾರ್ಮಸಿ, ನರ್ಸಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ - ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅಧಿಕ ಅಂಕ ಪಡೆದ ಆಧಾರದ ಮೇಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾಯ ಕಾಲೇಜುಗಳಿಂದ ದೃಢೀಕರಿಸಿ ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಗೆ ಖುದ್ದಾಗಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಜನವರಿ ೧೮ ಕೊನೆಯ ದಿನಾಂಕವಾಗಿರುತ್ತದೆ ಎಂದು ಮಡಿಕೇರಿ ಕಾಫಿ ಮಂಡಳಿ ಉಪನಿರ್ದೇಶಕರು ತಿಳಿಸಿದ್ದಾರೆ.