ಮಡಿಕೇರಿ, ಡಿ. 22: ಜಿಲ್ಲೆಯಲ್ಲಿ ತಾ. 22 ರಂದು ಹೊಸದಾಗಿ 19 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,07,372 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,672 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,480 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 75 ಮಂದಿ ಸಾವನ್ನಪ್ಪಿದ್ದು 117 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 33 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 1 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 83 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 81 ನಿಯಂತ್ರಿತ ವಲಯಗಳಿವೆ.