ಮಡಿಕೇರಿ, ಡಿ. 24: ಜಿಲ್ಲೆಯಲ್ಲಿ ತಾ.24 ರಂದು ಹೊಸದಾಗಿ 4 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,08,873 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,688 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,510 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 75 ಮಂದಿ ಸಾವನ್ನಪ್ಪಿದ್ದು 103 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 11 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , 92 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 76 ನಿಯಂತ್ರಿತ ವಲಯಗಳಿವೆ.