ಬೆಂಗಳೂರು, ಡಿ. 24: ಸಾರ್ವಜನಿಕ ವಲಯದಲ್ಲಿ ರಾತ್ರಿ ಕಫ್ರ್ಯೂವಿನ ವಿರುದ್ಧ ಅಭಿಪ್ರಾಯ ಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋ ದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿ ಸುವುದರ ಮೂಲಕ ವೈರಾಣುವಿನ ಹರಡುವಿಕೆ ತಡೆಯಲು ಕೋರಿದ್ದಾರೆ.