ಮಡಿಕೇರಿ, ಡಿ. ೨೫: ೭ನೇ ಹೊಸಕೇಟೆ ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ತಾ. ೨೬ ರಂದು (ಇಂದು) ಸಂಜೆ ೬.೩೦ ರಿಂದÀ ರಾತ್ರಿ ೮.೩೦ ರವರೆಗೆÀ ಅಯ್ಯಪ್ಪ ಸನ್ನಿಧಿಯಲ್ಲಿ ಮಂಡಲ ಪೂಜೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಇರುತ್ತದೆ. ದೇವಸ್ಥಾನಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕಾಗಿ ದೇವಾಲಯದ ಪ್ರಕಟಣೆ ತಿಳಿಸಿದೆ.