ಶನಿವಾರಸಂತೆ, ಡಿ. ೨೫: ಪಟ್ಟಣದ ರೋಟರಿ ಸಂಸ್ಥೆ ವತಿಯಿಂದ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ತಾ. ೨೭ ರಂದು ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಖ್ಯ ರಸ್ತೆಯ ರೋಟರಿ ಕಚೇರಿಯಿಂದ ಬೆಳಿಗ್ಗೆ ೬.೩೦ಕ್ಕೆ ಚಾಲನೆ ನೀಡಲಾಗುವ ಜಾಥಾ ದುಂಡಳ್ಳಿ, ಮಾದ್ರೆ, ಎಡೇಹಳ್ಳಿ, ಕಾಜೂರು ಮಾರ್ಗವಾಗಿ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಸಮಾಗಮಗೊಳ್ಳುವುದು.
ನಂತರ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ವಿ. ದಿವಾಕರ್ ವಹಿಸುವರು. ಮುಖ್ಯ ಅತಿಥಿಯಾಗಿ ರೋಟರಿ ಉಪ ರಾಜ್ಯಪಾಲ ಪಿ.ಕೆ. ರವಿ ಹಾಗೂ ಅಂತರರಾಷ್ಟಿçÃಯ ಸೈಕಲ್ ಪಟು ಕೆ.ಎನ್. ರಜನೀಶ್ ಪಾಲ್ಗೊಳ್ಳಲಿದ್ದಾರೆ. ಈ ಜಾಥಾ ಮೂಲಕ ಕಡ್ಡಾಯವಾಗಿ ಮಾಸ್ಕ್ ಧರಿಸುವ ಸ್ಯಾನಿಟೈಸರ್ ಬಳಸುವ ಹಾಗೂ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವದು. ಜಾಥಾದಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಎ.ಡಿ. ಮೋಹನ್ ಕುಮಾರ್ ೯೪೪೮೯೧೯೫೧೮ಗೆ ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ