ಕುಶಾಲನಗರ, ಡಿ. ೨೫: ಪೊಲೀಸ್ ಇಲಾಖೆಯಲ್ಲಿ ಇನ್ನು ಮುಂದೆ ಸ್ಥಳೀಯರು ಅವರ ಸ್ವಂತ ಊರಿನಲ್ಲಿ ಸೇವೆ ಸಲ್ಲಿಸಲು ಅವಕಾಶ ಇರುವುದಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಸೂಚನೆ ಬಂದಿದ್ದು ಪೊಲೀಸ್ ಠಾಣೆಗಳಲ್ಲಿ ಆಯಾ ಊರಿನ ಸಿಬ್ಬಂದಿ ಅಧಿಕಾರಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಸದÀ್ಯದಲ್ಲಿಯೇ ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಿಂದ ಸಾಮೂಹಿಕ ವರ್ಗಾವಣೆಯಾಗುವ ಸೂಚನೆಗಳು ಹೊರಬಿದ್ದಿವೆ. ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಪೊಲೀಸ್ ಠಾಣೆಗಳಲ್ಲಿ ಸ್ಥಳೀಯರೇ ಕರ್ತವ್ಯ ನಿರ್ವಹಿ ಸುತ್ತಿದ್ದು ಇದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೊಡ ಕುಂಟಾಗುತ್ತಿದೆ ಎನ್ನುವ ದೂರಿನ ಹಿನೆÀ್ನಲೆಯಲ್ಲಿ ದಕ್ಷಿಣ ವಲಯ ಪೊಲೀಸ್ ಮಹಾ ನಿರ್ದೇಶಕರು ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.