ಕುಶಾಲನಗರ, ಡಿ. ೨೫: ಕುಶಾಲನಗರ ಆಂಜನೇಯ ಸ್ವಾಮಿ ದೇವಾಲಯದಲ್ಲಿ ೩೫ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ಶನಿವಾರದಿಂದ ಎರಡು ದಿನಗಳ ಕಾಲ ನಡೆಯಲಿದೆ. ಶ್ರೀರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾಟ್ರಸ್ಟ್ ಮತ್ತು ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದೇವಾಲಯದ ಧಾರ್ಮಿಕ ಪೂಜಾವಿಧಿ ವಿಧಾನಗಳು ಜರುಗಲಿವೆ ಎಂದು ಆಂಜನೇಯ ದೇವಸ್ಥಾನ ಸೇವಾ ಟ್ರಸ್ಟ್ ಪ್ರಮುಖರು ಹಾಗೂ ಪ್ರಧಾನ ಅರ್ಚಕ ಡಾ. ರಾಧಾಕೃಷ್ಣ ಭಟ್ ಮಾಹಿತಿ ನೀಡಿದ್ದಾರೆ. ತಾ. ೨೬ ರಂದು (ಇಂದು) ದೇವಾಲಯದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಪವಮಾನ ಹೋಮ ನಡೆಯಲಿದೆ. ೨೭ ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಮಹಾ ಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯುವುದಾಗಿ ಅವರು ತಿಳಿಸಿದ್ದಾರೆ.